ಯೆಶಾಯ 49:5 - ಕನ್ನಡ ಸತ್ಯವೇದವು J.V. (BSI)5 ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬನ್ನು ತನಗೆ ಸೇರಿಸಿಕೊಳ್ಳಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಯೆಹೋವನ ಸೇವಕನಾಗಿರಬೇಕೆಂದು ಆತನು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿಯೇ ರೂಪಿಸಿದನು. ಇಸ್ರೇಲರನ್ನೂ ಯಾಕೋಬನನ್ನೂ ಆತನ ಬಳಿಗೆ ಮತ್ತೆ ಕರೆದುಕೊಂಡು ಬರಲು ಆತನು ನನ್ನನ್ನು ರೂಪಿಸಿದನು. ಯೆಹೋವನು ನನ್ನನ್ನು ಸನ್ಮಾನಿಸುವನು. ನಾನು ಆತನಿಂದ ಬಲವನ್ನು ಹೊಂದುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು. ಅಧ್ಯಾಯವನ್ನು ನೋಡಿ |