Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:8 - ಕನ್ನಡ ಸತ್ಯವೇದವು J.V. (BSI)

8 ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:8
31 ತಿಳಿವುಗಳ ಹೋಲಿಕೆ  

ಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು ಎಂದು ದೇವರು ಹೇಳುತ್ತಾನಲ್ಲಾ. ಈಗಲೇ ಆ ಸುಪ್ರಸನ್ನತೆಯಕಾಲ; ಇದೇ ಆ ರಕ್ಷಣೆಯ ದಿನ.


ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು


ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯಸಂಧನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಪುರಾತನ ಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು, ಪೂರ್ವದಲ್ಲಿ ಪಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳುಬೀಳಾದ ಪಟ್ಟಣಗಳನ್ನು ಜೀರ್ಣೋದ್ಧಾರಮಾಡುವರು.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಆಕಾಶವನ್ನು ನಿಲ್ಲಿಸಬೇಕೆಂತಲೂ ಭೂಲೋಕವನ್ನು ಸ್ಥಾಪಿಸಬೇಕೆಂತಲೂ ಚೀಯೋನಿಗೆ ನೀನು ನನ್ನ ಜನವೆಂದು ಹೇಳಬೇಕೆಂತಲೂ ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂವಿುಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವದೆಂದರೆ - ನೋಡು, ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ,


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಎಲ್ಲಾ ನಿವಾಸಿಗಳೊಡನೆ ಭೂವಿುಯು ಕರಗಿಹೋದರೂ ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ [ಎಂಬದು]. ಸೆಲಾ.


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನ ಮಾಡುವೆನು; ಭೂವಿುಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು.


ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಯೆಹೋವನಾದ ನಾನು ತೋಟಗಾರನು, ಕ್ಷಣಕ್ಷಣವೂ ನೀರು ಹೊಯ್ಯುತ್ತಿದ್ದೇನೆ; ಯಾರೂ ಮುಟ್ಟದ ಹಾಗೆ ಹಗಲಿರುಳೂ ಕಾಯುತ್ತೇನೆ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಇವುಗಳೇ ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು, ಬರೀ ಉಸಿರಾದರೂ ಒಯ್ಯುವದು. ನನ್ನನ್ನು ಆಶ್ರಯಿಸುವವನೋ ದೇಶವನ್ನನುಭವಿಸಿ ನನ್ನ ಪರಿಶುದ್ಧಪರ್ವತವನ್ನು ಬಾಧ್ಯವಾಗಿ ಹೊಂದುವನು.


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ಯೆಹೋವನು ನೇವಿುಸಿರುವ ಶುಭವರುಷ, ನಮ್ಮ ದೇವರು ಮುಯ್ಯಿ ತೀರಿಸುವ ದಿನ, ಇವುಗಳನ್ನು ಪ್ರಚುರಗೊಳಿಸುವದಕ್ಕೂ


ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು