ಯೆಶಾಯ 49:9 - ಕನ್ನಡ ಸತ್ಯವೇದವು J.V. (BSI)9 ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು. ಅಧ್ಯಾಯವನ್ನು ನೋಡಿ |