Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:12 - ಕನ್ನಡ ಸತ್ಯವೇದವು J.V. (BSI)

12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:12
20 ತಿಳಿವುಗಳ ಹೋಲಿಕೆ  

ಅವರು ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದದರಿಂದ ಆತನು ಅವರನ್ನು ಹಾಳು ಮಾಡುವನೇ ಹೊರತು ವೃದ್ಧಿಪಡಿಸುವದಿಲ್ಲ.


ಅವರು ಆತನನ್ನು ಹಿಂಬಾಲಿಸದೆ ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಬಂದಿ? ನನಗೆ ತಿಳಿಸಿದ್ದರೆ ನಾನು ಸಂಗೀತಮಾಡಿಸಿ ಮದ್ದಳೆ, ವೀಣೆ ಮುಂತಾದ ವಾದ್ಯಗಳೊಡನೆ ಸಂತೋಷದಿಂದ ನಿನ್ನನ್ನು ಸಾಗಕಳುಹಿಸುತ್ತಿದ್ದೆನು.


ಕೊಳಲು ವೀಣೆ ಮೊದಲಾದ ಅಚೇತನ ವಾದ್ಯಗಳು ಸ್ವರಗಳಲ್ಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ಇಂಥದೇ ಎಂದು ಹೇಗೆ ತಿಳಿಯುವದು?


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ಈಗ ನಾನು ಎಂಭತ್ತು ವರುಷದವನು. ಒಳ್ಳೇದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಸುಮ್ಮನೆ ಯಾಕೆ ಭಾರವಾಗಿರಬೇಕು?


ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.


ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು;


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು