Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:15 - ಕನ್ನಡ ಸತ್ಯವೇದವು J.V. (BSI)

15 ಕುಲಹೀನರು ಬೊಗ್ಗುವರು, ಕುಲೀನರು ಕುಗ್ಗುವರು, ಉನ್ನತರ ದೃಷ್ಟಿಯು ತಗ್ಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನರಮಾನವರು ತಗ್ಗಿಹೋಗುವರು. ಕುಲೀನರು ಕುಗ್ಗಿಹೋಗುವರು. ಗರ್ವಿಷ್ಠರ ಸೊಕ್ಕು ಅಡಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಜನರು ತಗ್ಗಿಸಲ್ಪಡುವರು. ಆ ಗಣ್ಯವ್ಯಕ್ತಿಗಳು ತಮ್ಮ ತಲೆಗಳನ್ನು ಕೆಳಗೆ ಮಾಡಿ ನೆಲದ ಕಡೆಗೆ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನರಮಾನವರು ತಗ್ಗಿಹೋಗುವರು. ಅಹಂಭಾವದ ಕಣ್ಣುಗಳು ಕಂಗೆಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:15
24 ತಿಳಿವುಗಳ ಹೋಲಿಕೆ  

ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಹೀಗಿರಲು ಅಧಮರಾಗಲಿ ಉತ್ತಮರಾಗಲಿ ತಗ್ಗಿಸಲ್ಪಡುವರು; (ಅವರನ್ನು ಕ್ಷವಿುಸಬೇಡ).


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?


ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸಿ ಢಮ್ಮನೆ ಬೀಳಿಸುವನು; ಉನ್ನತ ವೃಕ್ಷಗಳು ಕಡಿದುಹೋಗುವವು,


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ನಿನ್ನನ್ನು ಅವರ ಮುಂದೆ ಆಟಂಕವಾಗಿ ಒಡ್ಡುತ್ತೀಯಾ?


ದೀನರನ್ನು ಉದ್ಧರಿಸುತ್ತೀ; ಹವ್ಮಿುನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತೀ.


ಯೆಹೋವನೇ, ನನ್ನ ಎದೆಯಲ್ಲಿ ಹವ್ಮಿುಲ್ಲ; ನನಗೆ ಸೊಕ್ಕಿನ ಕಣ್ಣಿಲ್ಲ; ಅಸಾಧ್ಯಕಾರ್ಯಗಳಲ್ಲಿ ಕೈಹಾಕುವದಿಲ್ಲ.


ಕಣ್ಣು ರೆಪ್ಪೆಗಳನ್ನೆತ್ತಿಕೊಂಡು ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರುಂಟು.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಸೇನಾಧೀಶ್ವರನಾದ ಯೆಹೋವನ [ನ್ಯಾಯನಿರ್ಣಯ] ದಿವಸವು ಗರ್ವದಿಂದ ಹೆಚ್ಚಿಕೊಂಡಿರುವ ಸಮಸ್ತಕ್ಕೂ ಸಂಭವಿಸುವದು; ಆಗ ಅದೆಲ್ಲಾ ತಗ್ಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು