Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:20 - ಕನ್ನಡ ಸತ್ಯವೇದವು J.V. (BSI)

20 ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:20
23 ತಿಳಿವುಗಳ ಹೋಲಿಕೆ  

ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಇವರು ಇರುಳನ್ನು ಹಗಲೆಂದು ಸಾಧಿಸಿ ಕತ್ತಲಿಂದ ಬೆಳಕು ಬೇಗನೆ ಬರುವದೆಂದು ತಿಳಿಸುತ್ತಾರೆ.


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವದು.


ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ನಿರಪರಾಧಿಯಾಗಿಯೂ ಸನ್ಮಾರ್ಗಸ್ಥನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇ ಬಾರದು; ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ಶಿಕ್ಷೆಯನ್ನು ವಿಧಿಸದೆ ಬಿಡುವದಿಲ್ಲ.


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ದುಷ್ಟತನವೇ ಅವರ ಅನ್ನ; ಬಲಾತ್ಕಾರವೇ ಅವರ ದ್ರಾಕ್ಷಾರಸಪಾನ.


ಅಪಸಾಕ್ಷಿಯಿಂದ ತಪ್ಪು ಹೊರಿಸುವವರೂ ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ ನ್ಯಾಯವಂತನ ನ್ಯಾಯವನ್ನು ಸುಮ್ಮಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲಾ ನಿರ್ಮೂಲರಾಗುವರು.


ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸನು.


ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.


ಆಹಾ, ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದನ್ನು ಪ್ರೀತಿಸುತ್ತಾರೆ, ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ, ಅವರ ಎಲುಬುಗಳಿಂದ ಮಾಂಸವನ್ನು ಕಿತ್ತುಬಿಡುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು