ಯೆಶಾಯ 5:25 - ಕನ್ನಡ ಸತ್ಯವೇದವು J.V. (BSI)25 ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು. ಅಧ್ಯಾಯವನ್ನು ನೋಡಿ |
ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು.