Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:26 - ಕನ್ನಡ ಸತ್ಯವೇದವು J.V. (BSI)

26 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ ಅವರನ್ನು ಭೂಲೋಕದ ಅಂಚಿನಲ್ಲಿಂದ ಸಿಳ್ಳುಹಾಕಿ ಕರೆಯುವನು; ಇಗೋ, ತ್ವರೆಪಟ್ಟು ವೇಗವಾಗಿ ಬರುತ್ತಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:26
23 ತಿಳಿವುಗಳ ಹೋಲಿಕೆ  

ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು; ಅವರನ್ನು ವಿಮೋಚಿಸಿದ್ದೇನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.


ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಲ್ಲಿನ ನೊಣಗಳೂ ಅಶ್ಶೂರ್‍ದೇಶದ ತುಂಬಿಗಳೂ ಬರಲೆಂದು ಯೆಹೋವನು ಸಿಳ್ಳುಹಾಕುವನು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು.


ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆಯೇರುತ್ತವೆ; ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ, ಆ ಸಾಲುಗಳನ್ನು ಕಲಸುವದಿಲ್ಲ.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು; ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಇಗೋ, [ಆ ಶತ್ರುವು] ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವನ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ!


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು ಎಂದು ಉತ್ತರ ಕೊಟ್ಟನು.


ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು;


ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ.


[ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.


ಅವನು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಆಳಲಿ.


ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟದ್ದು ಅವರು ಬಿಲ್ಲುಗಾರರಿಗೆ ಹೆದರಿ ಓಡುವದಕ್ಕೋ? ಸೆಲಾ.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ನಾನು ಆರಿಸಿಕೊಂಡವರಿಗೆ ಅಪ್ಪಣೆಮಾಡಿದ್ದೇನೆ. ಹೌದು, ಉತ್ಸಾಹದಿಂದ ಮೆರೆಯುವ ಆ ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರನ್ನು ಕರೆದಿದ್ದೇನೆ.


ಆಹಾ, ಬಹು ಜನಸಮೂಹವಿದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗಗಳ ಆರ್ಭಟ! ಸೇನಾಧೀಶ್ವರನಾದ ಯೆಹೋವನು ಸೈನ್ಯವನ್ನು ಯುದ್ಧಕ್ಕಾಗಿ ಅಣಿಮಾಡುತ್ತಿದ್ದಾನೆ.


ಅವರ ಶರಣನು ಭಯದಿಂದ ಹೋಗಿಬಿಡುವನು; ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇವಿುನಲ್ಲಿ ಒಲೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹುವರುಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಾಯೇಲ್ಯರ ಮೇಲೆ ಬೀಳಮಾಡುವೆನು ಎಂದು ಮುಂತಿಳಿಸಿದ್ದರಷ್ಟೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು