Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:5 - ಕನ್ನಡ ಸತ್ಯವೇದವು J.V. (BSI)

5 ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:5
31 ತಿಳಿವುಗಳ ಹೋಲಿಕೆ  

ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.


ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವದು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವದು.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.


ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಆಗ ಒಬ್ಬ ದೇವದೂತನು ಮಾತಾಡುವದನ್ನು ಕೇಳಿದೆನು; ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ - ನಿತ್ಯಹೋಮವನ್ನು ನಿಲ್ಲಿಸುವದು, ಭಯಂಕರವಾದ ದೇವದ್ರೋಹಮಾಡುವದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವವು ಎಂದು ಪ್ರಶ್ನೆ ಮಾಡಲು


ವೈರಿಗಳೂ ವಿರೋಧಿಗಳೂ ಯೆರೂಸಲೇವಿುನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಭೂಪತಿನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು.


ಅವನ ದೇಶದ ಮೇರೆಗಳನ್ನು ಕೆಡವಿ ದುರ್ಗಗಳನ್ನು ಹಾಳುಮಾಡಿದ್ದೀ.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು.


ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಈ ಪಟ್ಟಣದೊಳಗೆ ಕೂಡಿಹಾಕುವೆನು.


ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.


ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.


ದಾರಿಗರೆಲ್ಲರೂ ಅವನನ್ನು ಸುಲಿಗೆಮಾಡುತ್ತಾರೆ; ಸುತ್ತಣವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.


ಕೊಲ್ಲುವ ಸಮಯ, ಸ್ವಸ್ಥ ಮಾಡುವ ಸಮಯ, ಕೆಡವಿಬಿಡುವ ಸಮಯ, ಕಟ್ಟುವ ಸಮಯ,


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಯಾಜಕನನ್ನೂ ಧಿಕ್ಕರಿಸಿದ್ದಾನೆ.


ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು