Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:7 - ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:7
47 ತಿಳಿವುಗಳ ಹೋಲಿಕೆ  

ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಯುವಕನು ಯುವತಿಯನ್ನು ವರಿಸುವಂತೆ ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.


ಕರ್ತನಾದ ಯೆಹೋವನು ಅವರ ನಡುನೆತ್ತಿಯನ್ನು ಹುಣ್ಣಿನಿಂದ ಬಾಧಿಸಿ ಅವರ ಮಾನವನ್ನು ಬೈಲುಮಾಡುವನು.


ಯೆಹೋವನು ತನ್ನ ಜನರ ಹಿರಿಯರನ್ನೂ ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು; ನೀವು ದ್ರಾಕ್ಷೆಯ ತೋಟವನ್ನು ನುಂಗಿಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿಯೇ ಇದೆ;


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು ಬಾಸುಂಡೆ ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವನ್ನು ಹಿಸಕಿ ಮುಚ್ಚಿಲ್ಲ, ಕಟ್ಟಿಲ್ಲ, ಎಣ್ಣೆಸವರಿ ಮೃದು ಮಾಡಿಲ್ಲ.


ಪ್ರೇಮವೇ, ಸಕಲ ಸಂತೋಷಗಳಿಗಿಂತ ನೀನು ಎಷ್ಟೋ ಮನೋಹರ, ಎಷ್ಟೋ ರಮ್ಯ!


ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ನಿನ್ನ ಬಲಗೈ ನೆಟ್ಟು ಸಾಕಿ ಬೆಳಸಿದ ಸಸಿಯನ್ನು ಕಾಪಾಡು.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಆ ದಿನದಲ್ಲಿ [ಹೀಗೆ ಗಾನ ಮಾಡುವರು] - ಇಗೋ, ವಿಹಾರದ ತೋಟ, ಇದನ್ನು ಕುರಿತು ಹಾಡಿರಿ;


ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರ ಅನುಸರಣೆಯನ್ನು ಬಿಟ್ಟು ತಿರುಗಿಕೊಂಡಿದ್ದೇವೆ, ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ಒಂದು ಪುಟ್ಟಿಯಲ್ಲಿ ಫಲಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು; ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು, ಅದರ ನಿವಾಸಿಗಳು ಸುಳ್ಳುಗಾರರು, ಅವರ ಬಾಯನಾಲಿಗೆಯು ಮೋಸಕರ.


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು