Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:8 - ಕನ್ನಡ ಸತ್ಯವೇದವು J.V. (BSI)

8 ಅಯ್ಯೋ, ಮನೆಗೆ ಮನೆಯನ್ನೂ ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಯ್ಯೋ, ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ, ಹೊಲಕ್ಕೆ ಹೊಲ ಸೇರಿಸುವ ನಿಮಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:8
14 ತಿಳಿವುಗಳ ಹೋಲಿಕೆ  

ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರವಿುಸಿಕೊಳ್ಳುತ್ತಾರೆ, ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ; ಮನೆಯನ್ನೂ ಮನೆಯವನನ್ನೂ ಸ್ವಾಸ್ತ್ಯವನ್ನೂ ಸ್ವಾಸ್ತ್ಯದವನನ್ನೂ ತುಳಿದುಬಿಡುತ್ತಾರೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ.


ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇವಿುನವರು ಇಸ್ರಾಯೇಲ್ ವಂಶದವರಲ್ಲಿ ಯಾರಯಾರನ್ನು - ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವಾಸ್ತ್ಯವಾಗಿ ಸಿಕ್ಕಿದೆ ಎಂದು ಹೀನೈಸಿದರೋ ಅವರೆಲ್ಲರೂ ಉಳಿದಿದ್ದಾರಲ್ಲಾ.


ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.


ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.


ಏನೂ ವಿುಗದಂತೆ ಅವನು ನುಂಗಿಬಿಟ್ಟದರಿಂದ ಅವನ ಸುಖವು ಅಸ್ಥಿರವಾಗಿರುವದು.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು