ಯೆಶಾಯ 50:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |