Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:2 - ಕನ್ನಡ ಸತ್ಯವೇದವು J.V. (BSI)

2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:2
46 ತಿಳಿವುಗಳ ಹೋಲಿಕೆ  

ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತೆ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ಯೆಹೋವನು ಅವನಿಗೆ - ಯೆಹೋವನ ಕೈ ಮೋಟುಗೈಯೋ; ನನ್ನ ಮಾತು ನೆರವೇರುತ್ತದೋ ಇಲ್ಲವೋ ಈಗ ನೀನು ನೋಡುವಿ ಎಂದು ಹೇಳಿದನು.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.


ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.


ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ಗಮನಿಸಲಿಲ್ಲ;


ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.


[ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.


ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.


ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ಯಾವನು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ಅದರಲ್ಲಿದ್ದ ಮೀನುಗಳು ಸತ್ತುಹೋದವು; ನದಿಯು ಹೊಲಸು ನಾರಿದ್ದರಿಂದ ಐಗುಪ್ತ್ಯರು ಅದರಲ್ಲಿ ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಆಗಿತ್ತು.


ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸು ನಾರುವದು; ಅದರಲ್ಲಿ ಕುಡಿಯುವದಕ್ಕೆ ಐಗುಪ್ತ್ಯರಿಗೆ ಹೇಸಿಗೆಯಾಗುವದು ಎಂದು ಹೇಳಬೇಕು ಅಂದನು.


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ಸಾಗರದ ಅಡಿಯಲ್ಲಿ ಅವರನ್ನು ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಮುಗ್ಗರಿಸದಂತೆ ನಡೆಯಿಸಿದಾತನು ಎಲ್ಲಿ?


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ನಾನು ನೋಡಲು ಇವರಲ್ಲಿ ಸಮರ್ಥರು ಯಾರೂ ಇಲ್ಲ; ನಾನು ಪ್ರಶ್ನೆಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.


ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.


ಮಹಾನದಿಯ ನೀರು ಬತ್ತಿಹೋಗುವದು.


ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ


ನೀವು ಹಿಜ್ಕೀಯನಿಂದ ಮರುಳಾಗಿ ಈ ಪ್ರಕಾರ ಮೋಸಹೋಗಬೇಡಿರಿ. ಅವನನ್ನು ನಂಬಲೂಬೇಡಿರಿ. ಯಾವ ರಾಜ್ಯ ಜನಾಂಗಗಳ ದೇವತೆಯಾದರೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ ಎಂದು ಹೇಳಿಸಿದನು.


ಇಸ್ರಾಯೇಲ್ಯರೋ ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು; ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.


ಆತನು ಗದರಿಸಲು ಕೆಂಪು ಸಮುದ್ರವು ಒಣಗಿ ಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.


ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ ನಿಮ್ಮನ್ನು ಕರೆದ ನನಗೆ ಉತ್ತರಕೊಡದೆ


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶನಮಾಡುವನು; ಯೂಫ್ರೇಟೀಸ್ ನದಿಯ ಮೇಲೆ ಕೈ ಝಾಡಿಸಿ ತನ್ನ ಬಿಸಿಗಾಳಿಯಿಂದ ಅದನ್ನು ಏಳು ತೊರೆಗಳನ್ನಾಗಿ ಒಡೆದು ಜನರು ಕೆರ ಮೆಟ್ಟಿ ದಾಟುವಂತೆ ಮಾಡುವನು.


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಅಪ್ಪಣೆಕೊಟ್ಟಿದ್ದಾನೆ;


ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ;


ನೀನು ಬಿಡಲ್ಪಟ್ಟು ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ ಎಂಬದು ನಿನ್ನ ದೇವರ ನುಡಿ.


ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವದಿಲ್ಲ, ಕರೆಯುವಾಗ ಉತ್ತರಕೊಡುವದಿಲ್ಲ.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ?


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು