Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:6 - ಕನ್ನಡ ಸತ್ಯವೇದವು J.V. (BSI)

6 ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:6
20 ತಿಳಿವುಗಳ ಹೋಲಿಕೆ  

ಆಗ ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಏಟುಹಾಕಿ -


ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.


ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ಆತನ ಮುಂದೆ ಮೊಣಕಾಲೂರಿ ಅಡ್ಡಬಿದ್ದರು.


ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ಕಸಕೊಂಡು ಆತನ ತಲೆಯ ಮೇಲೆ ಹೊಡೆದರು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಯೇಸು ಈ ಮಾತನ್ನು ಹೇಳಿದಾಗ ಹತ್ತರ ನಿಂತಿದ್ದ ಓಲೇಕಾರರಲ್ಲಿ ಒಬ್ಬನು - ಮಹಾಯಾಜಕನಿಗೆ ಹೀಗೆ ಉತ್ತರಕೊಡುತ್ತೀಯಾ ಎಂದು ಹೇಳಿ ಆತನ ಕೆನ್ನೆಗೆ ಒಂದು ಏಟು ಹಾಕಿದನು.


ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.


ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು -


ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಅದಕ್ಕೆ ಯೆಹೋವನು - ತಂದೆ ಮುಖದ ಮೇಲೆ ಉಗುಳಿದರೆ ಆಕೆ ಹೇಗೂ ಏಳು ದಿವಸ ನಾಚಿಕೆಯಿಂದ ಮರೆಯಾಗುವದಿಲ್ಲವೇ; ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು; ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು ಎಂದು ಉತ್ತರಕೊಟ್ಟನು.


ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ಬಾಯಿಕಿಸಿದು ನನ್ನನ್ನು ಅಣಕಿಸಿ ಛೀ ಎಂದು ನನ್ನ ದವಡೆಯ ಮೇಲೆ ಬಡಿದಿದ್ದಾರೆ.


ನನಗೆ ಅಸಹ್ಯಪಟ್ಟು ದೂರ ನಿಂತು ನನ್ನ ಮೇಲೆ ಉಗುಳುವದಕ್ಕೂ ಹಿಂದೆಗೆಯರು.


ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದದೆ.


ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ.


ಉಳುವವರು ನಮ್ಮ ಬೆನ್ನಿನ ಮೇಲೆ ಉತ್ತುತ್ತು ಉದ್ದವಾದ ಗೆರೆಗಳನ್ನು ಮಾಡಿದರು;


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು