Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:7 - ಕನ್ನಡ ಸತ್ಯವೇದವು J.V. (BSI)

7 ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಒಡೆಯನಾದ ಯೆಹೋವನು ನನಗೆ ಸಹಾಯ ಮಾಡುವನು. ಆದ್ದರಿಂದ ಅವರ ಶಾಪಗಳು ನನಗೆ ಯಾವ ಹಾನಿಯನ್ನು ಮಾಡುವದಿಲ್ಲ. ನಾನು ಬಲವಾಗಿರುವೆನು. ನಾನು ನಿರಾಶನಾಗುವದಿಲ್ಲವೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:7
21 ತಿಳಿವುಗಳ ಹೋಲಿಕೆ  

ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ;


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.


ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -


ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು.


ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ - ಯಾಕೋಬ್ಯರು ಇನ್ನು ನಾಚಿಕೆಗೆ ಈಡಾಗರು, ಅವರ ಮುಖವು ಇನ್ನು ಬಾಡದು,


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.


ಯೆಹೋವನೇ, ನೀನು ನನ್ನನ್ನು ಸರ್ವಾಪತ್ತುಗಳಿಂದ ಬಿಡಿಸಿ ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದರಿಂದ


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು