ಯೆಶಾಯ 50:8 - ಕನ್ನಡ ಸತ್ಯವೇದವು J.V. (BSI)8 ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದ್ದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ. ಅಧ್ಯಾಯವನ್ನು ನೋಡಿ |
ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.