ಯೆಶಾಯ 51:11 - ಕನ್ನಡ ಸತ್ಯವೇದವು J.V. (BSI)11 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು. ಅಧ್ಯಾಯವನ್ನು ನೋಡಿ |