Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:4
27 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನಾನು ದೇವರ ನೇಮವಿಲ್ಲದವನಲ್ಲ, ಕ್ರಿಸ್ತ ನಿಯಮಕ್ಕೊಳಗಾದವನೇ; ಆದರೂ ನಿಯಮವಿಲ್ಲದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ನನ್ನ ಜನರೇ, ನನ್ನ ಉಪದೇಶಕ್ಕೆ ಕಿವಿಗೊಡಿರಿ; ನನ್ನ ನುಡಿಗಳನ್ನು ಲಾಲಿಸಿರಿ.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ; ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯಾಹುವಿಗೆ ಸ್ತೋತ್ರ!


ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ಯಾವ ಜನರಿಗೆ ಯೆಹೋವನೇ ದೇವರಾಗಿದ್ದಾನೋ ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಚೀಯೋನ್ ಪಟ್ಟಣಕ್ಕೆ [ನನ್ನ] ನ್ಯಾಯದ ಮೂಲಕವೂ ದೇಶಾಂತರದಿಂದ ಬಿಡುಗಡೆಯಾಗಿ ಬರುವ ಅದರ ಪ್ರಜೆಗಳಿಗೆ [ನನ್ನ] ಧರ್ಮದ ಮೂಲಕವೂ ವಿಮೋಚನೆಯಾಗುವದು.


ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಯೆಹೋವನು ಧರ್ಮಸ್ವರೂಪನಾಗಿರುವದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು