ಯೆಶಾಯ 52:7 - ಕನ್ನಡ ಸತ್ಯವೇದವು J.V. (BSI)7 ಪರ್ವತಗಳ ಮೇಲೆ ತ್ವರೆಪಡುತ್ತಾ ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಒಳ್ಳೆಯ ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು ರಕ್ಷಣೆಯನ್ನು ಪ್ರಕಟಿಸುತ್ತಾ - ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ! ಅಧ್ಯಾಯವನ್ನು ನೋಡಿ |