Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:8 - ಕನ್ನಡ ಸತ್ಯವೇದವು J.V. (BSI)

8 ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ; ಯೆಹೋವನು ಚೀಯೋನಿಗೆ ತಿರುಗಿ ಬರುವದನ್ನು ಪ್ರತ್ಯಕ್ಷವಾಗಿ ನೋಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು : ಸರ್ವೇಶ್ವರ ಸಿಯೋನಿಗೆ ಮರಳಿಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. ಒಟ್ಟಾಗಿ ಸಂತಸಪಡುತ್ತಿದ್ದಾರೆ. ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:8
34 ತಿಳಿವುಗಳ ಹೋಲಿಕೆ  

ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.


ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ಆಗ ಎಲ್ಲರು ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ತುತೂರಿಯ ಶಬ್ದವನ್ನು ಕೇಳಿರಿ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇವಿುಸಲು ನಾವು ಕೇಳಲೊಲ್ಲೆವು ಎಂದು ಹೇಳಿದರು.


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ಉನ್ನತಪರ್ವತವನ್ನು ಹತ್ತಿಕೋ; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ - ಇಗೋ, ನಿಮ್ಮ ದೇವರು!


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.


ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.


ಆ ದಿನದಲ್ಲಿ [ಹೀಗೆ ಗಾನ ಮಾಡುವರು] - ಇಗೋ, ವಿಹಾರದ ತೋಟ, ಇದನ್ನು ಕುರಿತು ಹಾಡಿರಿ;


ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಗೀತವನ್ನು ಹಾಡುವರು - ನಮಗೆ ಬಲವಾದ ಪಟ್ಟಣವಿದೆ. [ಯೆಹೋವನು ತನ್ನ] ರಕ್ಷಣೆಯನ್ನು ಕೋಟೆಯನ್ನಾಗಿಯೂ ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಇವರು ಉಚ್ಚಧ್ವನಿಗೈಯುವರು; ಯೆಹೋವನ ಮಹಿಮೆಯನ್ನು ತಿಳಿದುಕೊಂಡವರಾಗಿ ಸಮುದ್ರದ ಕಡೆಯಿಂದ ಆರ್ಭಟಿಸುವರು -


ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡು ಹಿಡಿದು ಹೊಡೆದು ಗಾಯಪಡಿಸಿದರು; ಪವುಳಿಯ ಕಾವಲುಗಾರರು ಮೇಲುಹೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.


ಊರಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು; ನನ್ನ ಪ್ರಾಣಪ್ರಿಯನನ್ನು ಕಂಡಿರಾ ಎಂದು ಅವರನ್ನು ವಿಚಾರಿಸಿದೆನು.


ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಜನಾಂಗಗಳೂ ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ ಎಂದು ಹೇಳುವದು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು