Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:10 - ಕನ್ನಡ ಸತ್ಯವೇದವು J.V. (BSI)

10 ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:10
62 ತಿಳಿವುಗಳ ಹೋಲಿಕೆ  

ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.


ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ,


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಶರೀರಭಾವಾಧೀನರು ದೇವರಿಗೆ ಮೆಚ್ಚಿಕೆಯಾಗಿರಲಾರರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪಪರಿಹಾರಕ್ಕಾಗಿ ಸಮರ್ಪಣೆಮಾಡುವ ಲೇವಿಕ ಮಹಾಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸಬೇಕಾದ ಅವಶ್ಯವಿಲ್ಲ. ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ನಾನೂ ದೇವರ ಮೇಲೆ ಭರವಸವಿಟ್ಟವನಾಗಿರುವೆನು ಎಂತಲೂ ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ ಎಂತಲೂ ಹೇಳುತ್ತಾನೆ.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವದು.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು.


ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಅವನ ಸಂತತಿಯು ಶಾಶ್ವತವಾಗಿ ಇರುವದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು


ಅವನ ದಿವಸಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು ನೀನು ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ಅವರು ಬಂದು ಆತನ ನೀತಿಯನ್ನೂ ಆತನು ನಡಿಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.


ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.


ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ತನ್ನಲ್ಲಿ ದೇವರು ಆತನನ್ನೂ ಮಹಿಮೆಪಡಿಸುವನು, ಕೂಡಲೇ ಮಹಿಮೆಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು