ಯೆಶಾಯ 53:12 - ಕನ್ನಡ ಸತ್ಯವೇದವು J.V. (BSI)12 ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು. ಅಧ್ಯಾಯವನ್ನು ನೋಡಿ |