ಯೆಶಾಯ 53:4 - ಕನ್ನಡ ಸತ್ಯವೇದವು J.V. (BSI)4 ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು. ಅಧ್ಯಾಯವನ್ನು ನೋಡಿ |