Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:5 - ಕನ್ನಡ ಸತ್ಯವೇದವು J.V. (BSI)

5 ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:5
27 ತಿಳಿವುಗಳ ಹೋಲಿಕೆ  

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಪವಿತ್ರರಾಗುತ್ತಿರುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಸಿದ್ಧಿಗೆ ತಂದಿದ್ದಾನಷ್ಟೆ.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು.


ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.


ನಿಮ್ಮ ದೇವರಾದ ಯೆಹೋವನ ಶಿಕ್ಷಣಕ್ರಮವನ್ನೂ ಮಹಿಮೆಯನ್ನೂ ಭುಜಬಲವನ್ನೂ ಶಿಕ್ಷಾಹಸ್ತವನ್ನೂ


ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.


ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವವು; ಏಟುಗಳು ಅಂತರಂಗಕ್ಕೂ ತಗಲುವವು.


ನನ್ನ ಬಾಯಿಗೆ ಮುಟ್ಟಿಸಿ - ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು; ನಿನ್ನ ದೋಷವು ನೀಗಿತು, ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು ಅಂದನು.


ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.


ದೇವರು ಒಂದು ವೇಳೆ ಆ ಮನುಷ್ಯನಿಗೆ ಮೆಚ್ಚಿ - ಈಡು ಸಿಕ್ಕಿತು, ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು ಎಂದು ಅಪ್ಪಣೆಕೊಟ್ಟರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು