ಯೆಶಾಯ 54:1 - ಕನ್ನಡ ಸತ್ಯವೇದವು J.V. (BSI)1 ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದ್ದರಿಂದ ನೀನು ಬಹಳವಾಗಿ ಸಂತೋಷಿಸು. ಯೆಹೋವನು ಹೇಳುವುದೇನೆಂದರೆ, “ಗಂಡ ಬಿಟ್ಟಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಕೂಗು! ಏಕೆಂದರೆ ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |