ಯೆಶಾಯ 54:11 - ಕನ್ನಡ ಸತ್ಯವೇದವು J.V. (BSI)11 ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು. ಅಧ್ಯಾಯವನ್ನು ನೋಡಿ |
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ ಗೋಮೇಧಕ ರತ್ನ, ಕೆತ್ತುವದಕ್ಕೆ ಬೇಕಾಗುವ ರತ್ನ, ಕೆಂಪರಲು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.