Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:14 - ಕನ್ನಡ ಸತ್ಯವೇದವು J.V. (BSI)

14 ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:14
35 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ಯಾರೂ ಹಾದುಹೋಗಿ ಬಾರದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ಬೀಳನು; ಏಕಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಎದುರು ನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಆಕಾಶಮಂಡಲವನ್ನು ಹರಡಿ ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟಿಯಾ? ನಾಶಮಾಡಬೇಕೆಂದು [ಬಾಣವನ್ನು] ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ತಾನೇ ಇದೆ?


ಚೀಯೋನ್ ಪಟ್ಟಣಕ್ಕೆ [ನನ್ನ] ನ್ಯಾಯದ ಮೂಲಕವೂ ದೇಶಾಂತರದಿಂದ ಬಿಡುಗಡೆಯಾಗಿ ಬರುವ ಅದರ ಪ್ರಜೆಗಳಿಗೆ [ನನ್ನ] ಧರ್ಮದ ಮೂಲಕವೂ ವಿಮೋಚನೆಯಾಗುವದು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಎತ್ತಿ ಹೇಳಬೇಕು - ಆಹಾ, ಹಿಂಸಕನು ಕೊನೆಗೊಂಡನು, ರೇಗಾಟವು ನಿಂತಿತು!


ನಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲಾತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಡಿ ಹಿಂಸಿಸುವವರು [ನಿಮ್ಮ] ದೇಶದಿಂದ ನಿರ್ಮೂಲರಾದರು, ಬಲಾತ್ಕಾರವು ತೀರಿತು, ತುಳಿದುಬಿಡುವವರು ಮುಗಿದುಹೋದರಷ್ಟೆ.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!


ಆಗ ನೀವು [ಹಿಂದಿನ] ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ - [ಕಪ್ಪವನ್ನು] ಲೆಕ್ಕಿಸಿದವನು ಎಲ್ಲಿ, ತೂಕಮಾಡಿದವನು ಎಲ್ಲಿ, ಬುರುಜುಗಳನ್ನು ಗಣಿಸಿದವನು ಎಲ್ಲಿ ಅಂದುಕೊಳ್ಳುವಿರಿ.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.


ನೀನು ಮಲಗುವಾಗ ಹೆದರಿಕೆ ಇರುವದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.


ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು