Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:2 - ಕನ್ನಡ ಸತ್ಯವೇದವು J.V. (BSI)

2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವಿಸ್ತರಿಸು ನಿನ್ನ ಗುಡಾರವನು, ಚಾಚು ಮುಂದಕೆ ಗುಡಾರದ ಬಟ್ಟೆಗಳನು, ಹೆದರಬೇಡ; ಉದ್ದಮಾಡು ಹಗ್ಗಗಳನು, ಬಲಪಡಿಸು ಗೂಟಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ಮತ್ತು ನಿವಾಸದ ಪರದೆಗಳು ಹರಡಲಿ. ಹಿಂದೆಗೆಯಬೇಡ; ನಿನ್ನ ಗುಡಾರದ ಹಗ್ಗಗಳನ್ನು ಉದ್ದಮಾಡಿ, ಅದರ ಗೂಟಗಳನ್ನು ಬಲಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:2
8 ತಿಳಿವುಗಳ ಹೋಲಿಕೆ  

ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ; ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.


ಅಂಗಳದ ತೆರೆಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ; ಅಂಗಳದ ಬಾಗಲಿನ ಪರದೆಯು, ಅದರ ಹಗ್ಗಗಳು, ಗೂಟಗಳು ಇವುಗಳನ್ನೂ; ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನೂ;


ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ; ನನ್ನ ಗುಡಾರವನ್ನು ಹಾಕುವದಕ್ಕೂ ನನ್ನ ಪರದೆಗಳನ್ನು ಬಿಗಿಯುವದಕ್ಕೂ ಇನ್ನು ಯಾರೂ ಇರುವದಿಲ್ಲ.


ಗುಡಾರದ ಗೂಟಗಳು, ಅಂಗಳದ ಗೂಟಗಳು, ಇವುಗಳ ಹಗ್ಗಗಳು,


ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು - ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.


ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.


ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವದು; ಆ ದಿನದಲ್ಲಿ ನಿನ್ನ ಎಲ್ಲೆಯು ದೂರದ ತನಕ ವಿಸ್ತರಿಸಿಕೊಂಡಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು