Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:4 - ಕನ್ನಡ ಸತ್ಯವೇದವು J.V. (BSI)

4 ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:4
23 ತಿಳಿವುಗಳ ಹೋಲಿಕೆ  

ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆಯಲ್ಪಟ್ಟದ್ದು, ಮಾನ್ಯವಾದದ್ದು; ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ ಎಂದು ಶಾಸ್ತ್ರದಲ್ಲಿ ಬರೆದದೆ.


ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.


ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವಾಸ್ತ್ಯದಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವದು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.


ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು; ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು; ನಮ್ಮ ಅವಮಾನವನ್ನು ನೀಗಿಸಿಬಿಡು ಎಂದು ಕೇಳಿಕೊಳ್ಳುವರು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ - ಯಾಕೋಬ್ಯರು ಇನ್ನು ನಾಚಿಕೆಗೆ ಈಡಾಗರು, ಅವರ ಮುಖವು ಇನ್ನು ಬಾಡದು,


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.


ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಭೂವಿುಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು; ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು