ಯೆಶಾಯ 54:9 - ಕನ್ನಡ ಸತ್ಯವೇದವು J.V. (BSI)9 ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಲಯದಂತಿದೆ; ಇಂಥಾ ಜಲಪ್ರಲಯವು ಭೂವಿುಯನ್ನು ತಿರಿಗಿ ಆವರಿಸುವದಿಲ್ಲವೆಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವದಿಲ್ಲ, ಗದರಿಸುವದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಇದು ನನಗೆ ನೋಹನ ಕಾಲದ ಪ್ರಳಯದಂತಿದೆ. ನೋಹನ ಕಾಲದ ಪ್ರಳಯವು ಪುನಃ ಭೂಮಿಯನ್ನು ಆವರಿಸುವುದಿಲ್ಲ ಎಂದು ನಾನು ಪ್ರಮಾಣ ಮಾಡಿದ ಹಾಗೆಯೇ, ಇನ್ನು ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ, ನಿನ್ನನ್ನು ಗದರಿಸುವುದಿಲ್ಲ, ಎಂದು ಪ್ರಮಾಣ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |