Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:1 - ಕನ್ನಡ ಸತ್ಯವೇದವು J.V. (BSI)

1 ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:1
39 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.


ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಮನುಷ್ಯರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ದನಿಗೈಯುತ್ತೇನೆ.


ನಾನು ನನ್ನ ತಂದೆಯ ರಾಜ್ಯದಲ್ಲಿ ದ್ರಾಕ್ಷಾರಸವನ್ನು ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಇನ್ನು ಕುಡಿಯುವದೇ ಇಲ್ಲ ಎಂದು ನಿಮಗೆ ಹೇಳುತ್ತೇನೆ ಅಂದನು.


ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ನಿಮಗೆ ಹಾಲು ಕುಡಿಸಿದೆನು, ಅನ್ನಾ ಕೊಡಲಿಲ್ಲ; ಅನ್ನಾ ತಿನ್ನುವದಕ್ಕೆ ನಿಮಗೆ ಇನ್ನೂ ಶಕ್ತಿ ಇರಲಿಲ್ಲ, ಈಗಲಾದರೂ ಶಕ್ತಿಯಿಲ್ಲ;


ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು.


ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.


ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು.


ಬಾಯ ಮುದ್ದುಗಳಿಂದ ನನ್ನನ್ನು ಮುದ್ದಿಸಲಿ; ನಿನ್ನ ಲಾಲನೆಯು ದ್ರಾಕ್ಷಾರಸಕ್ಕಿಂತಲೂ ಮೇಲು.


ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ಆದರೆ ಪೇತ್ರನು ಅವನಿಗೆ - ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?


ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರತಂದನು; ಆಹಾ, ದೇವಸ್ಥಾನದ ಹೊಸ್ತಲ ಕೆಳಗಿನಿಂದ ನೀರು ಹೊರಟು ಮೂಡಲಿಗೆ ಹರಿಯುತ್ತಿತ್ತು (ದೇವಸ್ಥಾನವು ಪೂರ್ವಾಭಿಮುಖವಷ್ಟೆ); ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.


ಈ ತೊರೆಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿಬಾಳುವವು; ಮೀನುಗಳು ತಂಡೋಪತಂಡವಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು [ಆ ನೀರೂ] ಸಿಹಿಯಾಗುವದು; ಈ ತೊರೆಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವದು.


ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು