Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:6
45 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಇದರಿಂದ ಭಕ್ತರೆಲ್ಲರು ಸಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಮಹಾಪ್ರವಾಹವು ಅಂಥವರನ್ನು ಮುಟ್ಟುವದೇ ಇಲ್ಲ.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ


ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಯೆಹೋವನ ಕಡೆಗೆ ತಿರುಗಿಕೊಳ್ಳಿರಿ, ಬದುಕುವಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ನುಗ್ಗಿಯಾನು; ನುಂಗುವ ಆತನ ರೋಷಾಗ್ನಿಯನ್ನು ಆರಿಸುವದಕ್ಕೆ ಬೇತೇಲಿನಲ್ಲಿ ಯಾರೂ ಇರರು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ನನ್ನ ಸಾನ್ನಿಧ್ಯಕ್ಕೆ ಬಾ ಎಂಬ ನಿನ್ನ ಮಾತಿಗೆ ನಾನು - ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬರಲೇ ಬರುವೆನು ಎಂದು ಉತ್ತರ ಕೊಟ್ಟೆನು.


ನೀನು ಶುದ್ಧನೂ ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ ಸರ್ವಶಕ್ತನಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ


ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?


ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು -


ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -


ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು.


ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ಆತನು ತನ್ನ ಪ್ರಜೆಗೋಸ್ಕರ [ಘನದ] ಕೊಂಬನ್ನು ಎಬ್ಬಿಸಿದ್ದಾನೆ. ಆದದರಿಂದ ಆತನ ಎಲ್ಲಾ ಭಕ್ತರೂ ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲ್ಯರೂ ಹಿಗ್ಗುತ್ತಾರೆ. ಯಾಹುವಿಗೆ ಸ್ತೋತ್ರ!


ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.


ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.


ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮಮಹತ್ವವು ಸಮೀಪವಾಗಿದೆ; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತಾರೆ.


ಆದದರಿಂದ ನಿಮ್ಮ ನಿವಿುತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನವನ್ನು ಉಂಟುಮಾಡುತ್ತವಷ್ಟೆ.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.


ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ ಇಗೋ, ಇದ್ದೇನೆ, ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನೂ ಬೆರಳಸನ್ನೆಯನ್ನೂ ಕೆಡುಕಿನ ನುಡಿಯನ್ನೂ ಹೋಗಲಾಡಿಸಿ


ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.


ಆತನು ನಿಮಗೆ ಹೇಳಿಕಳುಹಿಸಿದ ಮಾತೇನಂದರೆ - ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ, ನಿಮಗೆ ಶಾಶ್ವತ ಸ್ವಾಸ್ತ್ಯವಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ನಿಮ್ಮ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ;


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಬೊಂಬೆಗಳನ್ನು ತೊರೆದುಬಿಟ್ಟು ಹಿಂದಿರುಗಿರಿ, ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರು ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗವನ್ನೂ ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದುಬಿಡಲಿ.


ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ - ಇಸ್ರಾಯೇಲ್ಯರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ [ನಮ್ಮನ್ನು ನಾವು ತಿದ್ದಿಕೊಳ್ಳುವ] ನಿರೀಕ್ಷೆಯು ಇನ್ನೂ ಉಂಟು.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು