Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಹೀಗನ್ನುತ್ತಾನೆ - ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೇಳುವುದೇನೆಂದರೆ: “ನಿಮ್ಮ ಆಲೋಚನೆಗಳು ನನ್ನ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:8
19 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮ ಸಮವಲ್ಲವಷ್ಟೆ.


ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ದೋಷಿಯ ದಾರಿಡೊಂಕು; ಶುದ್ಧನ ನಡತೆ ಸರಲ.


ಆಕಾಶವು ಉನ್ನತ, ಭೂವಿುಯು ಅಗಾಧ, ರಾಜರ ಹೃದಯವು ಅಗೋಚರ.


ಕರ್ತನೇ, ಯೆಹೋವನೇ, ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರಸಂತಾನದ ವಿಷಯದಲ್ಲಿಯೂ ವಾಗ್ದಾನಮಾಡಿದಿ. ಕರ್ತನೇ, ಯೆಹೋವನೇ, ನೀನು ನರಪ್ರಾಣಿಯನ್ನು ಹೀಗೆ ನಡಿಸಿದ್ದು ಆಶ್ಚರ್ಯ.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವದು; ಆತನ ಸಂಕಲ್ಪವು ಎಂದಿಗೂ ಕದಲುವದಿಲ್ಲ.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ನಾಮಾನನು ಇದನ್ನು ಕೇಳಿ ಕೋಪಗೊಂಡು - ಇದೇನು! ಅವನು ಹೇಗೂ ಹೊರಗೆ ಬಂದು ನಿಂತು ತನ್ನ ದೇವರಾದ ಯೆಹೋವನ ಹೆಸರು ಹೇಳಿ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.


ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು