ಯೆಶಾಯ 56:11 - ಕನ್ನಡ ಸತ್ಯವೇದವು J.V. (BSI)11 ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು. ಅಧ್ಯಾಯವನ್ನು ನೋಡಿ |