Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:12 - ಕನ್ನಡ ಸತ್ಯವೇದವು J.V. (BSI)

12 ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:12
23 ತಿಳಿವುಗಳ ಹೋಲಿಕೆ  

ತಾನು ಕದಲುವದೇ ಇಲ್ಲ; ತನಗೆ ವಿಪತ್ತು ಎಂದೆಂದಿಗೂ ಸಂಭವಿಸುವದಿಲ್ಲ ಅಂದುಕೊಂಡಿದ್ದಾನೆ.


ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ


ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ವ್ಯಭಿಚಾರದ್ರಾಕ್ಷಾರಸಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ; ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೆಯೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಪಾಡು ಏನು ಹೇಳಲಿ!


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ.


ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು