Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನನ್ನು ಅವಲಂಬಿಸಿದ ವಿದೇಶೀಯನು - ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು ಎಂದು ಮಾತಾಡದಿರಲಿ; ಮತ್ತು ನಪುಂಸಕನು - ಅಯ್ಯೋ, ನಾನು ಗೊಡ್ಡುಮರ ಎಂದು ಅಂದುಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರನ್ನು ಸೇರಿಕೊಂಡ ವಿದೇಶೀಯನು, “ಯೆಹೋವ ದೇವರು ತಮ್ಮ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವರು,” ಎಂದು ಹೇಳದಿರಲಿ. ಮತ್ತು ನಪುಂಸಕನು, “ನಾನು ಕೇವಲ ಒಣಗಿದ ಮರ,” ಎಂದು ಹೇಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:3
35 ತಿಳಿವುಗಳ ಹೋಲಿಕೆ  

ಕರ್ತನ ಸಂಸರ್ಗದಲ್ಲಿರುವವನಾದರೋ ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.


ಆತನಲ್ಲಿ ನೀವು ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವದಕ್ಕಾಗಿ ನಮ್ಮ ಸಂಗಡ ಕಟ್ಟಲ್ಪಡುತ್ತಾ ಇದ್ದೀರಿ.


ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ -


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು.


ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರುವಾಸಿಯನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತ ನಾಮವನ್ನು ಅನುಗ್ರಹಿಸುವೆನು.


ಬಾಬೆಲಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇವಿುಸಿಕೊಳ್ಳುವರು ಅನ್ನುತ್ತಾನೆ ಎಂದು ಹೇಳಿದನು.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಪರಿಚರ್ಯವನ್ನು ಮಾಡಬೇಕು; ಇತರ ಕುಲದವರು ನಿಮ್ಮ ಜೊತೆಯಲ್ಲಿರಕೂಡದು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -


ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಗೂನು ಗುಜ್ಜಾರಿಯಾಗಲಿ ಹೂಗಣ್ಣ ಕಾಯಿಗಣ್ಣನಾಗಲಿ ಕಜ್ಜಿ ತುರಿಗಳುಳ್ಳವನಾಗಲಿ


ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಸೇರದಂಥ ಒಬ್ಬೊಬ್ಬ ಪರದೇಶಿಯೂ ನಿನ್ನ ನಾಮಮಹತ್ತು ಭುಜಬಲ ಶಿಕ್ಷಾಹಸ್ತ ಇವುಗಳ ವರ್ತಮಾನ ಕೇಳಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವದಾದರೆ


ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ


ನಿಮ್ಮ ನಡುವೆ ಇರುವ ಪರವಾಸಿಗಳನ್ನೂ ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುಚಿಯೂ ಆಗದಂತೆ ಎಚ್ಚರದಿಂದಿರಬೇಕು.


ಪ್ರತಿವರುಷವೂ ಆ ಎರಡು ದಿವಸಗಳನ್ನು ಅವುಗಳ ವಿಷಯವಾದ ಶಾಸನದ ಪ್ರಕಾರ ನೇವಿುತವಾದ ಕಾಲದಲ್ಲಿ ಆಚರಿಸುವದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಕೂಡಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಗಬೇಕೆಂದೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು