ಯೆಶಾಯ 56:8 - ಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.” ಅಧ್ಯಾಯವನ್ನು ನೋಡಿ |