Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:10 - ಕನ್ನಡ ಸತ್ಯವೇದವು J.V. (BSI)

10 ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದದರಿಂದ ನೀನು ಸೋತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಡೆದು ನಡೆದು ದಣಿದಿದ್ದರೂ ‘ಇನ್ನು ಪ್ರಯೋಜನವಿಲ್ಲ’ ಎಂದುಕೊಳ್ಳಲಿಲ್ಲ. ಹೊಸ ಚೈತನ್ಯವನ್ನು ತಂದುಕೊಂಡು ನಿಲ್ಲದೆ ಮುಂದುವರೆದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇವುಗಳನ್ನೆಲ್ಲಾ ನೀವು ಬಹು ಪ್ರಯಾಸದಿಂದ ಮಾಡಿದರೂ ಆಯಾಸಗೊಂಡಿಲ್ಲ. ಯಾಕೆಂದರೆ ಇವುಗಳನ್ನು ಮಾಡುವುದರಲ್ಲೇ ನಿಮಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ, ‘ಏನೂ ಪ್ರಯೋಜನವಿಲ್ಲ,’ ಎಂದುಕೊಳ್ಳಲಿಲ್ಲ. ನೀನು ಹೊಸ ಬಲವನ್ನು ತಂದುಕೊಂಡು, ಬೇಸರಗೊಳ್ಳದೆ ಮುಂದುವರೆದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:10
12 ತಿಳಿವುಗಳ ಹೋಲಿಕೆ  

ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.


ಅವರೋ - ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು ಎಂದು ಹೇಳುತ್ತಾರೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.


ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ.


ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಬಲು ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.


ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ; ತಮಗೆ ಆಯಾಸವಾಗುವ ಮಟ್ಟಿಗೂ ಕೆಡುಕನ್ನು ಮಾಡುತ್ತಿದ್ದಾರೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ಸೂಳೆಯ ಮುಖವುಳ್ಳವಳಾಗಿ ನಾಚಿಕೆಗೆಟ್ಟಿದ್ದೀ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು