Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:11 - ಕನ್ನಡ ಸತ್ಯವೇದವು J.V. (BSI)

11 ನೀನು ಯಾರಿಗೆ ಬೆದರಿ ಹೆದರಿದ್ದರಿಂದ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:11
27 ತಿಳಿವುಗಳ ಹೋಲಿಕೆ  

ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು


ಆ ಅಧರ್ಮಸ್ವರೂಪನ ಪ್ರತ್ಯಕ್ಷತೆಯು ಸೈತಾನನ ಮಾಟಕ್ಕನುಗುಣವಾಗಿರುವದು. ಅದು ಮೋಸಗೊಳಿಸುವ ಸಕಲವಿಧವಾದ ಮಹತ್ಕಾರ್ಯ ಸೂಚಕಕಾರ್ಯ ಅದ್ಭುತಕಾರ್ಯ ಇವುಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶನ ಮಾರ್ಗದಲ್ಲಿರುವವರಿಗೋಸ್ಕರ ಸಂಭವಿಸುವದು.


ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ಎಫ್ರಾಯೀಮು ಸುಳ್ಳಿನಿಂದಲೂ ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ ಸದಮಲಸ್ವಾವಿುಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


ಆದರೆ ಆತನ ಮುಂದೆ ಅವರ ಬಾಯಿ ವಂಚಿಸಿ ನಾಲಿಗೆ ಸುಳ್ಳಾಡಿತು.


ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. [ಈಗ] ಹೆರುವವಳಂತೆ ಮೂಲುಗುತ್ತಾ ಅಸುರುಸಿರಿನೊಡನೆ ಏದುವೆನು.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ನಾನು ಶಾಶ್ವತವಾದ ರಾಣಿ ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.


ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು


ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇವಿುಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದ್ದರು.


ಹೆದರಿಕೊಂಡು ಹೋಗಿ ನಿನ್ನ ತಲಾಂತನ್ನು ಭೂವಿುಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೆ ಸಂದಿದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು