Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:12 - ಕನ್ನಡ ಸತ್ಯವೇದವು J.V. (BSI)

12 ನಾನು ನಿನ್ನ ಧರ್ಮವನ್ನು ಬೈಲಿಗೆ ತರುವೆನು, ನಿನ್ನ ಕಾರ್ಯಗಳೇನೋ ನಿನಗೆ ನಿಷ್ಪ್ರಯೋಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:12
20 ತಿಳಿವುಗಳ ಹೋಲಿಕೆ  

ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ!


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ವಿಗ್ರಹ ಕೆತ್ತುವವರೆಲ್ಲಾ ಮಟ್ಟಮಾಯವೇ; ಅವರ ಇಷ್ಟದ ಬೊಂಬೆಗಳು ಯಾತಕ್ಕೂ ಬಾರವು; ಬೊಂಬೆಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ; ನಾಚಿಕೆಗೆ ಗುರಿಯಾಗುವರು.


ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದು ಹೋಗುವವು;


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು