ಯೆಶಾಯ 57:19 - ಕನ್ನಡ ಸತ್ಯವೇದವು J.V. (BSI)19 ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |