Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:10 - ಕನ್ನಡ ಸತ್ಯವೇದವು J.V. (BSI)

10 ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:10
19 ತಿಳಿವುಗಳ ಹೋಲಿಕೆ  

ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವದು, ಕತ್ತಲಿದ್ದರೂ ಬೆಳಗಿನಂತಿರುವದು.


ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.


ಬಡವರಿಗೆ ದಾನಮಾಡುವವನು ಕೊರತೆಪಡನು; ಕಣ್ಣು ಮುಚ್ಚಿಕೊಳ್ಳುವವನು ಬಹುಶಾಪಕ್ಕೆ ಒಳಗಾಗುವನು.


ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ಇಗೋ, ಕತ್ತಲು ಭೂವಿುಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವದು.


ಯಾರನ್ನೂ ಹಿಂಸಿಸದೆ ಒತ್ತೆಯನ್ನು ಕೇಳದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು.


ಅದು ಯೆಹೋವನಿಗೆ ಗೊತ್ತು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವದು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವದರಿಂದ ನಿಮ್ಮಲ್ಲಿ ಬಡವರೇ ಇರುವದಿಲ್ಲ.


ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು