ಯೆಶಾಯ 58:11 - ಕನ್ನಡ ಸತ್ಯವೇದವು J.V. (BSI)11 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ ಅಧ್ಯಾಯವನ್ನು ನೋಡಿ |