Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:8 - ಕನ್ನಡ ಸತ್ಯವೇದವು J.V. (BSI)

8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:8
27 ತಿಳಿವುಗಳ ಹೋಲಿಕೆ  

ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.


ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿಮಾಡುವದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನೀತಿವಂತರಿಗೋಸ್ಕರ ಪ್ರಕಾಶವೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಬಿತ್ತಲ್ಪಟ್ಟಿವೆ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವದು, ಕತ್ತಲಿದ್ದರೂ ಬೆಳಗಿನಂತಿರುವದು.


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.


ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಿಬಂತು, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.


ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!


ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಪರೋಪಕಾರವು ತನಗೂ ಉಪಕಾರ; ಕ್ರೂರನು ತನ್ನ ಶರೀರವನ್ನೂ ಹಿಂಸಿಸುವನು.


ಉದಾರಿಯು ಪುಷ್ಟನಾಗುವನು; ನೀರು ಹಾಯಿಸುವವನಿಗೆ ನೀರು ಸಿಕ್ಕುವದು.


ಇಗೋ, ಕತ್ತಲು ಭೂವಿುಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು