Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:11 - ಕನ್ನಡ ಸತ್ಯವೇದವು J.V. (BSI)

11 ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:11
19 ತಿಳಿವುಗಳ ಹೋಲಿಕೆ  

ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.


ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಯಂತೆ ಬೀದಿಗಳೆಲ್ಲಾ ಕೂಡುವ ಚೌಕದಲ್ಲಿ ಬಿದ್ದಿದ್ದಾರೆ; ಯೆಹೋವನ ರೋಷವನ್ನೂ ನಿನ್ನ ದೇವರ ತರ್ಜನವನ್ನೂ ಹೊಟ್ಟೆ ತುಂಬಾ ಕುಡಿದಿದ್ದಾರೆ.


ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವದು.


ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.


ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.


ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ವಕ್ರಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವ ಯಾವನೂ ಸಮಾಧಾನವನ್ನರಿಯನು.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದೀ; ನಾನು ಸುಖವನ್ನು ಮರೆತುಬಿಟ್ಟು


ವಸ್ತ್ರವನ್ನು ಕಿತ್ತು ರಾಣಿಯನ್ನು ಬೈಲಿಗೆ ತರಲು ಆಕೆಯ ತೊತ್ತುಗಳು ಎದೆಬಡಿದುಕೊಂಡು ಪಾರಿವಾಳಗಳಂತೆ ಮೂಲುಗುತ್ತಾರೆ.


ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು ನನ್ನ ಸಮೀಪಕ್ಕೆ ಬಂದಿದ್ದಾರೆ.


ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು