Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:13 - ಕನ್ನಡ ಸತ್ಯವೇದವು J.V. (BSI)

13 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರ ಅನುಸರಣೆಯನ್ನು ಬಿಟ್ಟು ತಿರುಗಿಕೊಂಡಿದ್ದೇವೆ, ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:13
45 ತಿಳಿವುಗಳ ಹೋಲಿಕೆ  

ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.


ಎಫ್ರಾಯೀಮು ಸುಳ್ಳಿನಿಂದಲೂ ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ ಸದಮಲಸ್ವಾವಿುಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ಅವರು ನನ್ನ ಕಡೆಯಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ಅವರು ಪ್ರಾಪಂಚಿಕರಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು.


ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.


ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.


ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿಯೇ ಇದ್ದೀರಿ ಎಂದು ಯೆಹೋವನು ಅನ್ನುತ್ತಾನೆ.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ನೀನು ಯಾರಿಗೆ ಬೆದರಿ ಹೆದರಿದ್ದರಿಂದ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೆ.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.


ನೀಚನು ನೀಚವಾಗಿ ಮಾತಾಡುವನು; ಅವನ ಹೃದಯವು ಕೇಡನ್ನು ಕಲ್ಪಿಸಿ ಅಲ್ಲದ್ದನ್ನು ನಡೆಯಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ ಹಸಿವೆಗೊಂಡವನ ಆಶೆಯನ್ನು ಬರಿದು ಮಾಡಿ ಬಾಯಾರಿದವನ ಪಾನವನ್ನು ತಪ್ಪಿಸುವದಷ್ಟೆ.


ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ಆದರೆ ಆತನ ಮುಂದೆ ಅವರ ಬಾಯಿ ವಂಚಿಸಿ ನಾಲಿಗೆ ಸುಳ್ಳಾಡಿತು.


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ಎಲ್ಲಾ ಜನರಿಗೆ - ಇಗೋ, ಈ ಕಲ್ಲು ನಮ್ಮ ವಿಷಯದಲ್ಲಿ ಸಾಕ್ಷಿ ಹೇಳುವದು. ಯೆಹೋವನು ನಮಗೆ ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿರುವದರಿಂದ ನೀವು ನಿಮ್ಮ ದೇವರಾದ ಆತನನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧಸಾಕ್ಷಿಯಾಗಿರುವದು ಎಂದು ಹೇಳಿ


ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು.


ಅಯ್ಯೋ, ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ ನನ್ನ ಜನರಲ್ಲಿನ ದರಿದ್ರರಿಗೆ ನ್ಯಾಯವನ್ನು ತಪ್ಪಿಸಬೇಕೆಂತಲೂ ವಿಧವೆಯರನ್ನು ಸೂರೆಮಾಡಿ ಅನಾಥರನ್ನು ಕೊಳ್ಳೆಹೊಡೆಯಬೇಕೆಂತಲೂ


ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ


ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ ಇಗೋ, ಇದ್ದೇನೆ, ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನೂ ಬೆರಳಸನ್ನೆಯನ್ನೂ ಕೆಡುಕಿನ ನುಡಿಯನ್ನೂ ಹೋಗಲಾಡಿಸಿ


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.


ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು