Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:14 - ಕನ್ನಡ ಸತ್ಯವೇದವು J.V. (BSI)

14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿ ಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ನ್ಯಾಯವನ್ನು ಸಹ ಹಿಂದಕ್ಕೆ ತಳ್ಳಿಬಿಟ್ಟಿದ್ದೇವೆ. ನೀತಿಯನ್ನು ದೂರದಲ್ಲಿ ನಿಲ್ಲಿಸಿಬಿಟ್ಟಿದ್ದೇವೆ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಗೆ ಪ್ರವೇಶಿಸ ಇಲ್ಲಾ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಯು ಪ್ರವೇಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:14
25 ತಿಳಿವುಗಳ ಹೋಲಿಕೆ  

ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು.


ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.


ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು.


ಆತನ ಪವಿತ್ರಸ್ಥಾನವನ್ನು ಕೆಡವಿ ನಿತ್ಯಹೋಮವನ್ನು ಅಡಗಿಸುವದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.


ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.


ಅವನ ಊರಿನ ಹಿರಿಯರೂ ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.


ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು ನನ್ನ ಸಮೀಪಕ್ಕೆ ಬಂದಿದ್ದಾರೆ.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು