Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:17 - ಕನ್ನಡ ಸತ್ಯವೇದವು J.V. (BSI)

17 ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:17
24 ತಿಳಿವುಗಳ ಹೋಲಿಕೆ  

ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು


ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸಪ್ರೀತಿಗಳೆಂಬ ವಜ್ರಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು ಹೇಳಿದಾತನನ್ನು ಬಲ್ಲೆವು; ಇದಲ್ಲದೆ ಕರ್ತನು ತನ್ನ ಜನರ ನ್ಯಾಯವನ್ನು ವಿಚಾರಿಸುವನೆಂತಲೂ ಹೇಳಿಯದೆ.


ಆಗ - ನಿನ್ನ ಆಲಯಾಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತದೆ ಎಂದು ಬರೆದ ಮಾತು ಶಿಷ್ಯರ ನೆನಪಿಗೆ ಬಂತು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು, ನನ್ನ ನ್ಯಾಯವೇ ನನಗೆ ನಿಲುವಂಗಿಯೂ ಮುಂಡಾಸವೂ ಆಗಿತ್ತು.


ಸತ್ಯವಾಕ್ಯ ದೇವರ ಮಹತ್ವ ಇವುಗಳಿಂದ ಕೂಡಿದವರಾಗಿದ್ದೇವೆ. ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡವರೂ


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಆಗ ಆ ದೂತನು ನನಗೆ ಈ ಅಪ್ಪಣೆಮಾಡಿದನು - ನೀನು ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆರೂಸಲೇವಿುಗೂ ಚೀಯೋನಿಗೂ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ನಾನೊಬ್ಬನಾಗಿಯೇ ದ್ರಾಕ್ಷೆಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ಕಾಲಿನಿಂದ ಹೊಸಗಿದೆನು; ಅವರ ಸಾರವು ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಾಸಿಕೊಂಡೆನು.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಪ್ರಕಾಶಿಸು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷೆಯನ್ನು ತುಳಿಯುವವನ ಬಟ್ಟೆಯ ಹಾಗಿರುವದು ಏಕೆ?


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು