Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:2 - ಕನ್ನಡ ಸತ್ಯವೇದವು J.V. (BSI)

2 ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಅಕ್ರಮಗಳೇ, ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿವೆ. ನಿಮ್ಮ ಪಾಪಗಳೇ, ಆತನು ಹೇಳಿದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:2
14 ತಿಳಿವುಗಳ ಹೋಲಿಕೆ  

ನಿಮ್ಮ ಅಪರಾಧಗಳು ಇವುಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮಗೆ ಮೇಲನ್ನು ತಡೆದಿವೆ.


ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.


ಇಷ್ಟೆಲ್ಲಾ ನಡಿಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು; ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವನು.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [ನನ್ನ ಮುಖವನ್ನು] ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿ ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾದರು.


ನೋಡಿರಿ, ನಿಮ್ಮ ಉಪವಾಸದ ಫಲವೇನಂದರೆ - ವ್ಯಾಜ್ಯ, ಕಲಹ, ಕೇಡಿನ ಗುದ್ದು, ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ.


ಇಸ್ರಾಯೇಲ್ಯರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ - ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಗೆ ನಮ್ಮನ್ನು ತಪ್ಪಿಸಲಿ ಎಂದು ಆಲೋಚನೆ ಹೇಳಿದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು