ಯೆಶಾಯ 59:21 - ಕನ್ನಡ ಸತ್ಯವೇದವು J.V. (BSI)21 ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |